Home ಕರ್ನಾಟಕ ಕರಾವಳಿ ಲೋಕಸಭಾ ಚುನಾವಣಾ ಫಲಿತಾಂಶ : ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ

ಲೋಕಸಭಾ ಚುನಾವಣಾ ಫಲಿತಾಂಶ : ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ

0
ಲೋಕಸಭಾ ಚುನಾವಣಾ ಫಲಿತಾಂಶ : ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ

ಉಡುಪಿ: ಇಂದು ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ನಡೆಯುತ್ತಿದ್ದು, ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಈವರೆಗೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್‌ ಪೂಜಾರಿಯವರು ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.


ಉಡುಪಿಯ ಸೈಂಟ್‌ ಸಿಸಿಲೀಸ್‌ ಶಾಲೆಯಲ್ಲಿ ಮತ ಎಣಿಕೆ ಕಾಯ ನಡೆಯುತ್ತಿದ್ದು, ಮತ ಎಣಿಕೆಯ ಕೇಂದ್ರದತ್ತ ಕಾರ್ಯಕತರ ದಂಡೇ ಬರುತ್ತಿದೆ. ಇನ್ನು, ಬಿಜೆಪಿ ಅಭ್ಯಥಿ ಕೋಟ ಶ್ರೀನಿವಾಸ ಪೂಜಾರಿಯವರು ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆಯವರ ವಿರುದ್ಧ ಭಾರಿ ಮುನ್ನಡೆ ಸಾಧಿಸಿದ್ದು, ಕೋಟ ಶ್ರೀನಿವಾಸ ಪೂಜಾರಿಯವರು 2,10,116 ಮತಗಳನ್ನ ಪಡೆಯುವ ಮೂಲಕ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆ 1,27,459 ಮತಗಳ ಮೂಲಕ ಹಿನ್ನೆಡೆ ಸಾಧಿಸಿದ್ದಾರೆ.

 

LEAVE A REPLY

Please enter your comment!
Please enter your name here