
ಉಡುಪಿ/ಮಂಗಳೂರು: ರಾಜ್ಯದಲ್ಲಿ ಈಗಾಗಲೇ ಮುಂಗಾರು ಆರಂಭವಾಗಿದ್ದು, ಇಂದು ರಾಜ್ಯದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿರುವ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮುಂಗಾರು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚಿಸಿದೆ.
ಕಳೆದ ಒಂದು ವಾರದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಇನ್ನೂ ಏಳು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
