Home ಕರ್ನಾಟಕ ಕರಾವಳಿ ಕಡಲ್ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಕಡಲ್ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

0
ಕಡಲ್ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಕಡಲ್ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಡಲ್ಕೊರೆತ ಶಾಶ್ವತ ಪರಿಹಾರಕ್ಕಾಗಿ ಡಿಪಿಆರ್‌ ಸಿದ್ಧಪಡಿಸಲಾಗಿದ್ದು, ರಾಜ್ಯ ಸರ್ಕಾರದಿಂದ ಮಾತ್ರ ಇದಕ್ಕೆ ಪರಿಹಾರ ನೀಡಲು ಸಾಧ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಮನ್ವಯತೆಯೊಂದಿಗೆ ಕೆಲಸ ಮಾಡಬೇಕಿದೆ. ಕಡಲ್ಕೊರೆತ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದಿನ 10 ಕೋಟಿ ರೂ. ಬಿಲ್‌ ಬಾಕಿ ಇದೆ, ಅದನ್ನೂ ಬಿಡುಗಡೆ ಮಾಡಲಾಗುತ್ತದೆ ಎಂದರು.

ಇನ್ನು, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೇಶದ ಕಾನೂನು ಎಲ್ಲರಿಗೂ ಒಂದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು, ರಾಷ್ಟ್ರಪತಿಯಾಗಲಿ, ಸ್ಟಾರ್ ಆಗಲಿ, ಕೂಲಿ ಕಾರ್ಮಿಕನೇ ಆಗಲಿ. ಸರ್ಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ, ಯಾರನ್ನು ರಕ್ಷಿಸುವ ಪ್ರಶ್ನೆ ಇಲ್ಲ. ರಾಜ್ಯ ಸರ್ಕಾರ ಕೂಡ ಯಾರ ಪರ ನಿಲ್ಲುವುದಿಲ್ಲ ಎಂದರು.

 

LEAVE A REPLY

Please enter your comment!
Please enter your name here