
ಚಿತ್ರದುರ್ಗ: ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭಿವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ನಡೆದಿದೆ.
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಲಾರಿ ಮತ್ತು ಕಾರು ಎರಡೂ ಚಿತ್ರದುರ್ಗದಿಂದ ದಾವಣಗೆರೆಗೆ ಚಲಿಸುತ್ತಿದ್ದ ಸಂದರ್ಭ ಲಾರಿಯ ಟಯರ್ ಸ್ಫೊಟಗೊಂಡಿದೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಆರು ಮಂದಿಯ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಸ್ತುತ ಅವರನ್ನು ಆಸ್ಪತ್ರೆಗೆ ದಾಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಭರಮಸಾಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
