
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ನಟನ ಬಂಧನದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳೂ ಕೂಡ ನಡೆಯುತ್ತಿದೆ. ಜಸ್ಟೀಸ್ ಫಾರ್ ರೇಣುಕಾಸ್ವಾಮಿ ಅಂತ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಹಾಕಿದ್ದ ನಟಿ ರಮ್ಯಾ. ಇದೀಗ ದರ್ಶನ್ ಅಭಿಮಾನಿಗಳ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ಸುದ್ದಿ ವಾಹಿನಿಯೊಂದರಲ್ಲಿ ಮಾತನಾಡಿದ ಅವರು, ದರ್ಶನ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ ಎಂದು ಬಿಂಬಿಸಲಾಗುತ್ತಿದೆ ವಿನಃ ಅದೇ ನಿಜವಲ್ಲ ಎಂದಿದ್ದಾರೆ. ಆತನಿಗೆ ಸಿಕ್ಕಿರುವ ಜನಪ್ರಿಯತೆ ನೆತ್ತಿಗೇರಿದೆ. ಹಿಂದೆಯೂ ಕೂಡ ಅವರು ತಪ್ಪು ಮಾಡಿದ್ದರು. ಪದೇ ಪದೇ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವುದು ಸಾಮಾನ್ಯ ಎಂಬಂತಾಗಿದೆ ಎಂದಿದ್ದಾರೆ.
ಇನ್ನು, ದರ್ಶನ್ ಅವರು ಕಳೆದ ಚುನಾವಣೆಯಲ್ಲಿ ಒಂದೆರಡು ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದರು, ಆದ್ರೆ ಅವರೆಲ್ಲರೂ ಚುನಾವಣೆಯಲ್ಲಿ ಸೋತಿದ್ದರು. ಪೊಲೀಸ್ ಠಾಣೆಯ ಮುಂದೆ ಜನ ನಿಂತಿದ್ದಾರೆ ಅಂದ ಮಾತ್ರಕ್ಕೆ ಆತ ಅಷ್ಟು ಪ್ರಭಾವ ಹೊಂದಿದ್ದಾನೆ ಎಂದರ್ಥವಲ್ಲ. ದರ್ಶನ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ ಎಂದು ಹೈಪ್ ಮಾಡಲಾಗುತ್ತಿದೆ ಅಷ್ಟೇ ಎಂದಿದ್ದಾರೆ.
