Home ಕರ್ನಾಟಕ ಕರಾವಳಿ ಬಿಜೆಪಿ ಹಿರಿಯ ಮುಖಂಡ, ಮಾಜಿ ವಿಧಾನ ಪರಿಷತ್‌ ಸದಸ್ಯ ಭಾನುಪ್ರಕಾಶ್‌ ಇನ್ನಿಲ್ಲ

ಬಿಜೆಪಿ ಹಿರಿಯ ಮುಖಂಡ, ಮಾಜಿ ವಿಧಾನ ಪರಿಷತ್‌ ಸದಸ್ಯ ಭಾನುಪ್ರಕಾಶ್‌ ಇನ್ನಿಲ್ಲ

0
ಬಿಜೆಪಿ ಹಿರಿಯ ಮುಖಂಡ, ಮಾಜಿ ವಿಧಾನ ಪರಿಷತ್‌ ಸದಸ್ಯ ಭಾನುಪ್ರಕಾಶ್‌ ಇನ್ನಿಲ್ಲ

ಶಿವಮೊಗ್ಗ: ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಜೆಪಿಯ ಹಿರಿಯ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್‌(69) ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

ಶಿವಮೊಗ್ಗದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಷಣ ಮಾಡಿದ ಭಾನುಪ್ರಕಾಶ್‌ ಮನೆಗೆ ಹೊರಟಿದ್ದ ವೇಳೆ ವಿಪರೀತ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಇನ್ನು, 2009 ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಅವರು, 2013-19 ರವರೆಗೆ ಎಂಎಲ್ ಸಿಯಾಗಿದ್ದರು. ಪಕ್ಷ ಸಂಘಟನೆಯಲ್ಲಿ ಅವರ ಕೊಡುಗೆ ಅವಿಸ್ಮರಣೀಯ. ತಮ್ಮ ಮಾತುಗಾರಿಕೆ, ಸರಳತೆಯಿಂದಲೇ ಗುರುತಿಸಿಕೊಂಡಿರುವ ಅವರು, ಪಕ್ಷದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.

 

LEAVE A REPLY

Please enter your comment!
Please enter your name here