
ಉಡುಪಿ: ಹಿರಿಯ ನ್ಯಾಯವಾದಿ ಹಾಗೂ ಕಾಂಗ್ರೆಸ್ ಮುಖಂಡ ಚೇರ್ಕಾಡಿ ವಿಜಯ ಹೆಗ್ಡೆ ಮಂಗಳವಾರ ಮುಂಜಾನೆ ಅಂಬಲಪಾಡಿಯ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಉಡುಪಿ ವಕೀಲರ ಸಂಘದ ಅಧ್ಯಕ್ಷರಾಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಚುನಾವಣಾ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಇನ್ನು, ವಿಜಯ ಹೆಗ್ಡೆ ಅವರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನ 2ಗಂಟೆಯ ಸುಮಾರಿಗೆ ಕೋರ್ಟ್ ಹಿಂಬದಿಯ ರಸ್ತೆಯ ಡಯಾನ ಸ್ಟೋರ್ ಸಮೀಪದ ಹೆಗ್ಡೆಯವರ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಸಂಜೆ ಅವರ ಸ್ವಗೃಹ ಚೇರ್ಕಾಡಿಯಲ್ಲಿ ಅಂತ್ಯಕ್ರೀಯೆ ನಡೆಸಲಾಗುವುದು ಎನ್ನಲಾಗಿದೆ.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
