
ಮಂಗಳೂರು: ಉದ್ಯಮಿಗೆ ಚೂರಿ ಇರಿದು ಮನೆ ದರೋಡೆ ಮಾಡಿರುವ ಘಟನೆ ಮಂಗಳೂರು ಹೊರವಲಯದ ಪೆರ್ಮಂಕಿ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಸಿವಿಲ್ ಕಾಂಟ್ರಾಕ್ಟ್ ಆಗಿರುವ ಉದ್ಯಮಿ ಪದ್ಮನಾಭ ಕೋಟ್ಯಾನ್ ಎಂಬುವವರ ಮನೆಯಲ್ಲಿ ದರೋಡೆ ನಡೆದಿದೆ.
ಇನ್ನೋವಾ ಕಾರಿನಲ್ಲಿ ಬಂದಿದ್ದ 8 ದುಷ್ಕರ್ಮಿಗಳ ತಂಡ ಮನೆಗೆ ನುಗ್ಗಿ ಮನೆಯಲ್ಲಿರುವವರಿಗೆ ಚೂರಿ ತೋರಿಸಿ ಬೆದರಿಸಿದ್ದಾರೆ. ಉದ್ಯಮಿಯ ಪತ್ನಿಯನ್ನು ಕಟ್ಟಿ ಹಾಕಿದ ದುಷ್ಕರ್ಮಿಗಳು, ಉದ್ಯಮಿಯ ಭುಜಕ್ಕೆ ಚೂರಿಯಿಂದ ಇರಿದು ನಗದು ಸೇರಿ, ಮನೆಯಲ್ಲಿದ್ದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ.
ಇನ್ನು, ಘಟನೆಯಲ್ಲಿ ಗಾಯಗೊಂಡ ಉದ್ಯಮಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
