
ದಕ್ಷಿಣ ಕನ್ನಡ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಇಂದು ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಗೆ ಹವಾಮಾನ ಇಲಾಖೆ ಇಂದು ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇನ್ನು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲೂ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇರುವ ಹಿನ್ನೆಲೆ ಶಾಲೆಗಳಿಗೆ ರಜೆ ಇಲ್ಲ ಎಂದು ಡಿಸಿ ಡಾ.ಕೆ.ವಿದ್ಯಾಕುಮಾರಿ ಸ್ಪಷ್ಟನೆ ನೀಡಿದ್ದಾರೆ.
