
ಮಂಗಳೂರು: ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಹಲೆವೆಡೆ ನೆರೆ ಬಂದು ಮನೆಳಿಗೆ ನೀರು ನುಗ್ಗಿದೆ. ಇನ್ನೂ ಹಲವೆಡೆ ಸುಂಟರಗಾಳಿ ಬೀಸಿ ಮರಗಳು ಧರೆಗುರುಳಿವೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜಿಗೆ ರಜೆಯನ್ನು ಕೂಡ ನೀಡಲಾಗುತ್ತಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವಡೆ ಭಾರೀ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಸೇರಿದಂತೆ ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗದಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರೀ ಮಳೆ ಹಿನ್ನೆಲೆ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ, ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಕೂಡ ನದಿ, ಸಮುದ್ರದ ನೀರಿಗೆ ಇಳಿಯಬಾರದು, ವಿದ್ಯುತ್ ಕಂಬ ಹಾಗೂ ತುಂಡಾದ ವಿದ್ಯುತ್ ತಂತಿಗಳಿಂದ ದೂರ ಇರುವಂತೆ ಸೂಚಿಸಲಾಗಿದೆ.
