
ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಬಿಟ್ಟೂ ಬಿಡದೇ ಮಳೆಯಾಗುತ್ತುದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗೆ ಸಾಕಷ್ಟು ಅವಾಂತರಗಳೂ ಕೂಡ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆಯನ್ನು ಕೂಡ ಘೋಷಿಸಲಾಗಿತ್ತು. ಇಂದೂ ಕೂಡ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಮಂಗಗಳೂರು ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಮಂಗಳೂರಿನಲ್ಲಿ ಮಳೆ ಹೆಚ್ಚಳಗೊಂಡ ಹಿನ್ನೆಲೆ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಮಂಗಳೂರು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಇನ್ನು, ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ಶಾಲೆಗೆ ರಜೆ ಇಲ್ಲ. ರಜೆಯ ಕುರಿತು ಕುಂದಾಪುರ ವಿಭಾಗಾಧಿಕಾರಿಳ ಹೆಸರಲ್ಲಿ ನಕಲಿ ಆದೇಶ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಆದರೆ ಅದು ನಕಲಿ ಆದೇಶ ಪ್ರತಿ, ಶಾಲಾ-ಕಾಲೇಜಿಗೆ ಯಾವುದೇ ರಜೆ ಘೋಷಣೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಇಂದು ಮಳೆಯ ಆರ್ಭಟ ಮುಂದುವರಿಯಲಿದ್ದು, ಸಮುದ್ರ ತೀರದಲ್ಲಿರುವವರಿಗೆ ಮೀನುಗಾರರಿಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
