
ಇದೀಗ ನಿರುದ್ಯೋಗ ಯುವಕ ಯುವತಿಯರಿಗೆ ಅಂಚೆ ಇಲಾಖೆಯು ಗುಡ್ ನ್ಯೂಸ್ ಒಂದನ್ನು ನೀಡಿದ್ದು ಅಂಚೆ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ ಇದ್ದವರು ಅರ್ಜಿ ಸಲ್ಲಿಸಬಹುದಾಗಿದೆ.
ಹೌದು ಜುಲೈ 15ರಿಂದ ಅಂಚೆ ಇಲಾಖೆಯಲ್ಲಿ ನೇಮಕಾತಿ ಪ್ರಾರಂಭವಾಗಲಿದ್ದು, 30,000ಕ್ಕೂ ಹೆಚ್ಚು ಹುದ್ದೆ ಖಾಲಿ ಇರಲಿದ್ದು ಗ್ರಾಮೀಣ ಡಾಕ್ ಸೇವಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಈ ಹುದ್ದೆಗಳಿಗೆ ಅರ್ಜಿ ಹಾಕಲು ಅಭ್ಯರ್ಥಿಯು ಗಣಿತ ಮತ್ತು ಇಂಗ್ಲಿಷ್ ವಿಷಯದಲ್ಲಿ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯನ್ನು ಪೂರ್ಣ ಮಾಡಿರಬೇಕು.
ಈ ಅರ್ಹತೆ ಬೇಕು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ಎಲ್ಸಿಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ರಾಜ್ಯದ ಭಾಷೆ ಕನ್ನಡವನ್ನು ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು. ಜೊತೆಗೆ ಕಂಪ್ಯೂಟರ್ ಕಾರ್ಯನಿರ್ವಹಿಸಲು ತಿಳಿದಿರಬೇಕು. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ. ಹಾಗೆ 10ನೇ ತರಗತಿಯಲ್ಲಿ ಪಡೆದ ಅಂಕಗಳಿಂದ ಆಧಾರದ ಮೇಲೆ ಅವುಗಳನ್ನು ಪರಿಶೀಲನೆ ಮಾಡಿ ಮೆರಿಟ್ ಆಧಾರದ ಮೇಲೆ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಇದಕ್ಕೆ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ ಜುಲೈ 15, 2024 ಆಗಿರಲಿದ್ದು ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ ಆಗಸ್ಟ್ ನಲ್ಲಿ ಎನ್ನಲಾಗಿದೆ. ಅರ್ಜಿ ಹಾಕಲು https://indiapost.gov.in ಈ ಲಿಂಕ್ ಬಳಸಿ
