
ಬೆಂಗಳೂರು: ಬುಧವಾರದಂದು ಕರ್ನಾಟಕದ ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 6 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ.
