
ಮೂಡುಬಿದಿರೆ: ಹಲ್ಲೆ ಹಾಗೂ ಕೊಲೆ ಬೆದರಿಕೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕಿನ ಅಜೆಕಾರು ಪೆರ್ಣೆ ಗ್ರಾಮದ ಶಂಕರ ಆಚಾರಿ (58) ಎಂದು ಗುರುತಿಸಲಾಗಿದೆ.
ಆರೋಪಿ 23 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನನ್ನು ಬಂಧಿಸುವಂತೆ ನ್ಯಾಯಾಲಯವು ಮೂಡುಬಿದಿರೆ ಪೊಲೀಸರಿಗೆ ವಾರಂಟ್ ಜಾರಿಗೊಳಿಸಿತ್ತು.
ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಅವರ ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
