
ತೆಲಂಗಾಣ: ಭದ್ರಾದ್ರಿ ಕೊಥಗುಡೆಂ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್ಕೌಂಟರ್ನಲ್ಲಿ 6 ನಕ್ಸಲರು ಸಾವನ್ನಪ್ಪಿದ ಘಟನೆ ನಡೆದಿದೆ.
ನಕ್ಸಲರು ಮತ್ತು ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 6 ಮಂದಿ ಮಾವೋವಾದಿಗಳು ಸಾವನ್ನಪ್ಪಿದ್ದು, ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ.
ಗಾಯಗೊಂಡ ಇಬ್ಬರು ಭದ್ರತಾ ಸಿಬ್ಬಂದಿ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
