
ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹೊರವಲಯದಲ್ಲಿ ಜಾತ್ರೆಗೆಂದು ಬಂದ ಯುವಕರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಅಪಘಾತದಲ್ಲಿ ಇಬ್ಬರು ಪಾದಚಾರಿಗಳು ಹಾಗೂ ಬೈಕ್ ಸವಾರರಿಬ್ಬರು ಸೇರಿ ಒಟ್ಟು ನಾಲ್ವರು ಯುವಕರ ಮೃತಪಟ್ಟಿದ್ದಾರೆ.
ಮೃತರನ್ನು ಅನಿಲ ಖೈನೂರ (23), ಚೌಡಕಿ (22), ಕುಮಾರ ಪ್ಯಾಟಿ (18), ರಾಯಪ್ಪ ಬಾಗೇವಾಡಿ (24) ಇಂಡೈ ಗುರುತಿಸಲಾಗಿದೆ. ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದು, ಇನ್ನೋರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾನೆ.
ಶಾಹಿದ ಹುನಗುಂದ, ಪ್ರಶಾಂತ ಕುರುಬಗೌಡರ, ಹನಮಂತ ಕರುಬಗೌಡರಗೆ ಗಂಭಿರ ಗಾಯಗಳಾಗಿದ್ದು, ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತೆ ಪಡೆಯುತ್ತಿದ್ದಾರೆ.
ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಬೈಕ್ ಹರಿದು ಅಪಘಾತ ಸಂಭವಿಸಿದೆ.
