
ಮುಂಬೈ: ನಗರದ ಲೋವರ್ ಪರೇಲ್‌ನಲ್ಲಿರುವ ಕಮಲಾ ಮಿಲ್ ಕಾಂಪೌಂಡ್‌ನ ಏಳು ಅಂತಸ್ತಿನ ಕಟ್ಟಡ ಟೈಮ್ಸ್ ಟವರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
14 ಅಂತಸ್ತನ್ನು ಹೊಂದಿರುವ ಕಟ್ಟಡದಲ್ಲಿ 3 ರಿಂದ 7 ಮಹಡಿಯವರೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಕ್ಷಣವೇ ಸ್ಥಳಕ್ಕೆ ಒಂಬತ್ತು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
