Home ಸುದ್ದಿಗಳು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

0
ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣವಾಗಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಮಳೆಯಾಗುವ  ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ  ನೀಡಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡದಲ್ಲೂ ಸಾಧಾರಣವಾಗಿರಲಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

 

LEAVE A REPLY

Please enter your comment!
Please enter your name here