Home ಸುದ್ದಿಗಳು ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕರಿಸಿದ ಭಾರತೀಯ ರೈಲ್ವೇ

ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕರಿಸಿದ ಭಾರತೀಯ ರೈಲ್ವೇ

0
ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕರಿಸಿದ ಭಾರತೀಯ ರೈಲ್ವೇ

ನವದೆಹಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಅವರ ರಾಜೀನಾಮೆಯನ್ನು ಭಾರತೀಯ ರೈಲ್ವೇ ಅಂಗೀಕರಿಸಿದೆ.

ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಭಾರತೀಯ ರೈಲ್ವೆನಲ್ಲಿ  ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು.

ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಇತ್ತೀಚೆಗಷ್ಟೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಬಳಿಕ ಕುಸ್ತಿಪಟು ವಿನೇಶ್ ಫೋಗಟ್‌ಗೆ ಹರಿಯಾಣ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿತ್ತು.

ಹರಿಯಾಣದ ಜುಲಾನಾ ಕ್ಷೇತ್ರದಿಂದ ವಿನೇಶ್ ಫೋಗಟ್ ಕಣಕ್ಕಿಳಿಯಲಿದ್ದಾರೆ. ಬಜರಂಗ್ ಪುನಿಯಾ ಅವರನ್ನು ಅಖಿಲ ಭಾರತ ಕಿಸಾನ್ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ವಿನೇಶ್ ಫೋಗಟ್ ‘ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ನನ್ನ ಜೀವನದ ಸ್ಮರಣೀಯ ಮತ್ತು ಹೆಮ್ಮೆಯ ಸಮಯ. ನನ್ನ ಜೀವನದ ಈ ಹಂತದಲ್ಲಿ ನಾನು ರೈಲ್ವೆ ಸೇವೆಯಿಂದ ಹೊರಬರಲು ನಿರ್ಧರಿಸಿದೆ. ನನ್ನ ರಾಜೀನಾಮೆಯನ್ನು ಭಾರತೀಯ ರೈಲ್ವೆಯ ಸಮರ್ಥ ಅಧಿಕಾರಿಗಳಿಗೆ ಸಲ್ಲಿಸಿದ್ದೇನೆ. ರಾಷ್ಟ್ರದ ಸೇವೆಯಲ್ಲಿ ರೈಲ್ವೆ ನನಗೆ ನೀಡಿದ ಈ ಅವಕಾಶಕ್ಕಾಗಿ ನಾನು ಭಾರತೀಯ ರೈಲ್ವೆ ಕುಟುಂಬಕ್ಕೆ ಯಾವಾಗಲೂ ಕೃತಜ್ಞಳಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

 

LEAVE A REPLY

Please enter your comment!
Please enter your name here