
15 ವರ್ಷಗಳ ಸುಧೀರ್ಘ ದಾಂಪತ್ಯಕ್ಕೆ ತಮಿಳಿನ ಖ್ಯಾತ ನಟ ಜಯಂ ರವಿ ಅಂತ್ಯ ಹಾಡಿದ್ದಾರೆ.
ಜಯಂ ರವಿ ಮತ್ತು ಆರತಿ ನಡುವಿನ ದಾಂಪತ್ಯ ಜೀವನಕ್ಕೆ ಪೂರ್ಣ ವಿರಾಮ ಬಿದ್ದಿದೆ. ಈ ಜೋಡಿ 2009ರಲ್ಲಿ ಮದುವೆ ಆಗಿದ್ದರು. ಇವರಿಗೆ ಇಬ್ಬರು ಗಂಡು ಮಕ್ಕಳು ಇದ್ದಾರೆ.
ಇಷ್ಟು ವರ್ಷಗಳ ಬಳಿಕ ರವಿ ಮತ್ತು ಆರತಿ ಅವರು ಡಿವೋರ್ಸ್ ಪಡೆದಿದ್ದು ಅವರ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.
ಅವರು ಡಿವೋರ್ಸ್ ಪಡೆದುಕೊಂಡಿದ್ದಾರೆ. ಪತ್ನಿ ಆರತಿ ಜೊತೆಗಿನ ಸಂಸಾರಕ್ಕೆ ಅವರು 15 ವರ್ಷಗಳ ಹಿಂದೆ ಜಯಂ ರವಿ ಮತ್ತು ಆರತಿ ಅವರು ಮದುವೆ ಆಗಿದ್ದರು. ಸೋಶಿಯಲ್ ಮೀಡಿಯಾ ಮೂಲಕ ತಮ್ಮ ವಿಚ್ಛೇದನದ ಸುದ್ದಿಯನ್ನು ಜಯಂ ರವಿ ತಿಳಿಸಿದ್ದಾರೆ.
‘ಹಲವು ಅಧ್ಯಾಯಗಳನ್ನು ಹೊಂದಿದ ಪಯಣವೇ ಜೀವನ. ಎಲ್ಲ ಅಧ್ಯಾಯಕ್ಕೂ ಅದರದ್ದೇ ಆದ ಅವಕಾಶ ಮತ್ತು ಸವಾಲುಗಳು ಇವೆ. ನೀವು ನನ್ನ ತೆರೆ ಮೇಲಿನ ಮತ್ತು ತೆರೆ ಹಿಂದಿನ ಜೀವನವನ್ನು ಗಮನಿಸುತ್ತಾ ಬಂದಿದ್ದೀರಿ. ನಾನು ಯಾವಾಗಲೂ ಅಭಿಮಾನಿಗಳು ಮತ್ತು ಮಾಧ್ಯಮದವರ ಜೊತೆ ಪಾರದರ್ಶಕವಾಗಿ ನಡೆದುಕೊಳ್ಳಲು ಪ್ರಯತ್ನಿಸಿದ್ದೇನೆ.
ಇಂದು ನಾನು ಭಾರವಾದ ಮನಸ್ಸಿನಿಂದ ವೈಯಕ್ತಿಕ ಜೀವನದ ಈ ವಿಷಯ ತಿಳಿಸುತ್ತಿದ್ದೇನೆ. ಸಾಕಷ್ಟು ಯೋಚಿಸಿದ ಬಳಿಕ ಆರತಿ ಜೊತೆ ವಿಚ್ಛೇದನ ಪಡೆಯಲು ನಿರ್ಧರಿಸಿದೆ. ಇದು ಅವಸರದಲ್ಲಿ ತೆಗೆದುಕೊಂಡ ನಿರ್ಧಾರ ಎಲ್ಲ. ಎಲ್ಲರ ಒಳಿತಿಗಾಗಿ ಈ ನಿರ್ಧಾರ. ಈ ಕಷ್ಟದ ಸಂದರ್ಭದಲ್ಲಿ ನನ್ನ ಮತ್ತು ನನ್ನ ಕುಟುಂಬದವರ ಖಾಸಗಿತನವನ್ನು ಗೌರವಿಸಬೇಕು ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ಈ ವಿಚಾರದಲ್ಲಿ ಯಾವುದೇ ಗಾಸಿಪ್, ವದಂತಿ, ಊಹಾಪೋಹ, ಆರೋಪ ಮಾಡಬೇಡಿ. ಇದು ಖಾಸಗಿಯಾಗಿಯೇ ಇರಲಿ’ ಎಂದು ಜಯಂ ರವಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
