
ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಇಂದು ಮತ್ತೆ ನಾಳೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡು ಪ್ರದೇಶದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ರೀತಿಯಲ್ಲಿ ಮಳೆಯಾಗುವ ಸಂಭವವಿದೆ.
ಇಂದಿನಿಂದ ಸೆ.17ರವರೆಗೆ ಇದೇ ರೀತಿಯ ವಾತಾವರಣ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ.
