
ಇಂಫಾಲ್: ಮಣಿಪುರದಲ್ಲಿ ಕೋಮು ಘರ್ಷಣೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಕೊನೆಗೊಳ್ಳುವಂತೆ ಕಾಣುತ್ತಿಲ್ಲ. ಕಾರಣ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಲಾಗಿದೆ.
ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳು ಆಯಾ ಜಿಲ್ಲೆಗಳಲ್ಲಿ ಮಂಗಳವಾರ ಬೆಳಿಗ್ಗೆ 5 ರಿಂದ 10 ರವರೆಗೆ ಕರ್ಫ್ಯೂ ಸಡಿಲಿಸುವುದಾಗಿ ಘೋಷಿಸಿದ್ದರು.
ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸಡಿಲಿಕೆ ಆದೇಶವನ್ನು ರದ್ದುಗೊಳಿಸಲಾಗಿದೆ ಮತ್ತು ಎರಡೂ ಜಿಲ್ಲೆಗಳಲ್ಲಿ ಕರ್ಫ್ಯೂ ಮರು ಹೇರಲಾಗಿದೆ.
ಸೆಪ್ಟೆಂಬರ್ 6 ರಂದು ರಾಜ್ಯದ ಬಿಷ್ಣುಪುರ್ ಜಿಲ್ಲೆಯ ಮೊಯಿರಾಂಗ್ನಲ್ಲಿ ಆರ್ಪಿಜಿ ದಾಳಿ ನಡೆಸಿತ್ತು. ಸೆಪ್ಟೆಂಬರ್ 7 ರಂದು ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಕುಕಿ ಹೋರಾಟಗಾರರು ನಡೆಸಿದ ದೀರ್ಘ ಶ್ರೇಣಿಯ ರಾಕೆಟ್ ದಾಳಿಗೆ ಐವರು ಹತ್ಯೆಯಾಗಿದ್ದರು.
ಈ ಬಂಡಾಯ ಹೋರಾಟಗಾರರು ಏಕಾಂಗಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯ ಮನೆಗೆ ನುಗ್ಗಿ ನಿದ್ದೆಯಲ್ಲೇ ಗುಂಡಿಟ್ಟು ಕೊಂದ ಬಳಿಕ ಪರಿಸ್ಥಿತಿ ಹದಗೆಟ್ಟಿತ್ತು.
