
ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೆಪ್ಟೆಂಬರ್ 21ರಂದು ಆಯೋಜಿಸಿರುವ ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
2021 ರಲ್ಲಿ, ಶ್ವೇತಭವನದಲ್ಲಿ ಕ್ವಾಡ್ ನಾಯಕರ ಸಮ್ಮೇಳನವನ್ನು ನಡೆಸಲಾಯಿತು. ಅಂದಿನಿಂದ ಪ್ರತಿ ವರ್ಷ ಈ ಸಮ್ಮೇಳನ ನಡೆಯುತ್ತಿದೆ.
ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್ ಪ್ರಧಾನಿ ಕಿಶಿದಾ ಫ್ಯೂಮಿಯೊ ಅವರನ್ನು ಸ್ವಾಗತಿಸಲು ಬೈಡನ್ ಎದುರು ನೋಡುತ್ತಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.
ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಡೆಲವೇರ್‌ನ ವಿಲ್ಮಿಂಗ್ಟನ್‌ನ ನಿವಾಸದಲ್ಲಿ ಕ್ವಾಡ್ ನಾಯಕರಿಗೆ ಬೈಡನ್ ಆತಿಥ್ಯ ವಹಿಸುತ್ತಿದ್ದಾರೆ.
