
ಶ್ರೀನಗರ: ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದಿದೆ.
ನಾಲ್ವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದರು, ಅವರಲ್ಲಿ ಇಬ್ಬರು ಜೆಸಿಒ ನೈಬ್ ಸುಬೇದಾರ್ ವಿಪನ್ ಕುಮಾರ್ ಮತ್ತು ಸಿಪಾಯಿ ಅರವಿಂದ್ ಸಿಂಗ್ ಹುತಾತ್ಮರಾಗಿದ್ದಾರೆ.
ಭಯೋತ್ಪಾದಕರ ಇರುವಿಕೆ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸಿದೆ.
ಕಾರ್ಯಾಚರಣೆ ಬಳಿಕ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸೇನೆ ವಶಕ್ಕೆ ಪಡೆದಿದ್ದಾರೆ.
