
ಚಂಡೀಗಢ: ಬಾಲಿವುಡ್ ನಟಿ, ಸಂಸದೆ ಕಂಗನಾ ರಣಾವತ್ ಅಭಿನಯಿಸಿರುವ ‘ಎಮರ್ಜೆನ್ಸಿ’ ಸಿನಿಮಾಗೆ ಈಗ ಮತ್ತೊಂದು ತೊಂದರೆ ಎದುರಾಗಿದೆ.
ಚಿತ್ರ ʻಎಮರ್ಜೆನ್ಸಿʼಗೆ ಸಂಬಂಧಿಸಿದಂತೆ ಕಂಗನಾ ಅವರಿಗೆ ಚಂಡೀಗಢದ ಜಿಲ್ಲಾ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ವಕೀಲರ ಸಂಘದ ಮಾಜಿ ಅಧ್ಯಕ್ಷ ವಕೀಲ ರವೀಂದರ್ ಸಿಂಗ್ ಬಸ್ಸಿ ಅವರು, ಈ ಚಿತ್ರದಲ್ಲಿ ಸಿಖ್ಖರ ಪ್ರತಿಷ್ಠೆಯನ್ನು ಹಾಳು ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಸಿಖ್ಖರ ಚಿತ್ರಣವನ್ನು ತಪ್ಪಾಗಿ ಪ್ರದರ್ಶಿಸಲಾಗಿದೆ. ಜೊತೆಗೆ ಸಿಖ್ ಸಮುದಾಯದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಹಾಗಾಗಿ ಕಂಗನಾ ವಿರುದ್ಧ ಕೇಸ್ ದಾಖಲಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.
ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್ ಕಂಗನಾ ಅವರಿಗೆ ನೋಟಿಸ್ ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ಮುಂದೂಡಿದೆ.
‘ಎಮರ್ಜೆನ್ಸಿ’ ಚಿತ್ರವನ್ನು ಸೆ.6ರಂದು ರಿಲೀಸ್ ಮಾಡಬೇಕಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಬಿಡುಗಡೆಗೆ ಹಲವು ಅಡ್ಡಿ ಆತಂಕಗಳು ಎದುರಾಗಿವೆ. ಸೆನ್ಸಾರ್‌ಗೆ ಸಂಬಂಧಿಸಿದ ಸಮಸ್ಯೆಗಳಿಂದ ತೊಂದರೆ ಸಿಲುಕಿಕೊಂಡಿರುವ ಈ ಸಿನಿಮಾಗೆ ಇನ್ನೂ ಕೂಡ ಪ್ರಮಾಣ ಪತ್ರ ಸಿಕ್ಕಿಲ್ಲ. ಹಾಗಾಗಿ, ಕಂಗನಾ ಸಂಕಷ್ಟಕ್ಕೆ ಈಡಾಗಿದ್ದಾರೆ.
ನಟಿ ಕಂಗನಾ ಅವರು ನಿರ್ದೇಶಿಸಿ, ನಿರ್ಮಾಣ ಮಾಡಿರುವ ‘ಎಮರ್ಜೆನ್ಸಿ’ ಚಿತ್ರದಲ್ಲಿ ಇಂದಿರಾ ಗಾಂಧಿ ಪಾತ್ರವನ್ನು ಕೂಡ ಅವರೇ ನಿಭಾಯಿಸಿದ್ದಾರೆ.
