Home ಸುದ್ದಿಗಳು ಜೈಲಿನಿಂದ ಹೊರ ಬರುತ್ತಿದಂತೆ ಮತ್ತೆ ಅರೆಸ್ಟ್ ಆದ ಶಾಸಕ ಮುನಿರತ್ನ

ಜೈಲಿನಿಂದ ಹೊರ ಬರುತ್ತಿದಂತೆ ಮತ್ತೆ ಅರೆಸ್ಟ್ ಆದ ಶಾಸಕ ಮುನಿರತ್ನ

0
ಜೈಲಿನಿಂದ ಹೊರ ಬರುತ್ತಿದಂತೆ ಮತ್ತೆ ಅರೆಸ್ಟ್ ಆದ ಶಾಸಕ ಮುನಿರತ್ನ

ಬೆಂಗಳೂರು: ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಕೇಸ್‌ನಲ್ಲಿ ಜೈಲುಪಾಲಾಗಿದ್ದ ಶಾಸಕ ಮುನಿರತ್ನಗೆ  ಕೋರ್ಟ್‌ ಜಾಮೀನು ನೀಡಿ, ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್‌ ಆಗಿ ಹೊರ ಬಂದ ತಕ್ಷಣ ಕಗ್ಗಲಿಪುರ ಪೊಲೀಸರು  ಹಾಗೂ ಡಿವೈಎಸ್‌ಪಿ ದಿನಕರ್ ಶೆಟ್ಟಿ ಮುನಿರತ್ನರನ್ನು ವಶಕ್ಕೆ ಪಡೆದಿದ್ದಾರೆ.

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾದ ಬಳಿಕ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕೋವಿಡ್ ಸಮಯದಲ್ಲಿ ನನ್ನ ಸಾಮಾಜಿಕ ಸೇವೆಯನ್ನು ಗುರುತಿಸಿ ಮುನಿರತ್ನ ಕರೆ ಮಾಡಿದ್ದರು. ಅದರಂತೆ ಭೇಟಿಯಾದ ಸಂತ್ರಸ್ತೆ ಹಾಗೂ ಮುನಿರತ್ನ ನಡುವೆ ಆತ್ಮೀಯತೆ ಬೆಳೆದಿತ್ತು. ಆಗಾಗ ವಿಡಿಯೊ ಕಾಲ್‌ ಮೂಲಕ ಮಾತನಾಡುತ್ತಿದ್ದರು. ಹೀಗೊಂದು ದಿನ ನಗ್ನವಾಗಿ ವಿಡಿಯೊ ಕರೆ ಮಾಡುವಂತೆ ಒತ್ತಾಯಿಸಿದಾಗ ಸಂತ್ರಸ್ತೆ ನಿರಾಕರಿಸಿದ್ದರಂತೆ.

ಇದಾದ ಬಳಿಕ ಸಂತ್ರಸ್ತೆಯನ್ನು ಗೋಡೌನ್‌ಗೆ ಕರೆಸಿಕೊಂಡು ನಿನ್ನ ನೋಡಿದರೆ ಮೈ ಜುಮ್‌ ಎನಿಸುತ್ತೆ ಎಂದೇಳಿ ತಬ್ಬಿಕೊಳ್ಳಲು ಮುಂದಾಗಿದ್ದರಂತೆ. ಇದಕ್ಕೆ ಸಂತ್ರಸ್ತೆ ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇದೆಲ್ಲಾ ಕಾಮನ್ ಎಂದಿದ್ದಾರೆ. ನಾನು ಕಿರುಚಿಕೊಳ್ಳುತ್ತೇನೆ ಎಂದಾಗ ನಾನು ಶಾಸಕ, ಅಪಾರ ಜನಬೆಂಬಲವಿದೆ ಸುಮ್ಮನಿದ್ದರೆ ಸರಿ , ಇಲ್ಲವಾದರೆ ನಿನ್ನ ವಿರುದ್ಧವೇ ಕಂಪ್ಲೆಂಟ್ ನೀಡುತ್ತೇನೆ ಎಂದು ಹೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದರಂತೆ.

ಅತ್ಯಾಚಾರದ ಬಳಿಕ ಈ ರೂಂನಲ್ಲಿ ಸೀಕ್ರೆಟ್ ವೀಡಿಯೊ ರೆಕಾರ್ಡರ್ ಇಟ್ಟಿದ್ದು, ಎಲ್ಲಾ ದೃಶ್ಯಗಳು ಸೆರೆಯಾಗಿದೆ. ನಿನ್ನ ವಿಡಿಯೊ ಎಡಿಟ್ ಮಾಡಿ ಹಂಚುತ್ತೇನೆ. ಹೇಳಿದಂತೆ ಕೇಳಬೇಕು ಅಂತಾ ಹನಿಟ್ರ್ಯಾಪ್ ಮಾಡುವಂತೆ ಹೇಳಿ ನನ್ನನ್ನು ಬಳಸಿಕೊಂಡರು ಎಂದು ಸಂತ್ರಸ್ತೆ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಜತೆಗೆ ಚಿತ್ರೀಕರಿಸಿದ ವಿಡಿಯೊಗಳನ್ನು ಟಿವಿಯಲ್ಲಿ ಹಾಕಿ ತೋರಿಸುತ್ತಾ, 2020 ರಿಂದ 2022ರ ಅವಧಿಯಲ್ಲಿ ನಿರಂತರ ಅತ್ಯಾಚಾರ ನಡೆಸಿದ್ದಾರೆ. ಇದೇ ವೇಳೆ ಹನಿಟ್ರ್ಯಾಪ್‌ಗು ಬಳಕೆ ಮಾಡಿಕೊಂಡಿದ್ದಾರೆ. ಹೇಳಿದಂತೆ ಕೇಳಲಿಲ್ಲ ಅಂದರೆ ಗಂಡ ಮತ್ತು ಮಕ್ಕಳಿಗೆ ವಿಡಿಯೊ ತೋರಿಸೋದಾಗಿ ಬೆದರಿಕೆ ಹಾಕಿದ್ದಾರೆ.

ಮುನಿರತ್ನ ಹನಿಟ್ರ್ಯಾಪ್‌ ಮಾಡಿಸುತ್ತಿದ್ದನಂತೆ. ತನಗೆ ಆಗದವರನ್ನು ಮಟ್ಟ ಹಾಕಲು ಹನಿಟ್ರ್ಯಾಪ್‌ ಮಾಡಿ ಅವರಿಗೆ ಏಡ್ಸ್‌ ಸೋಂಕಿತರ ರಕ್ತ ಇಂಜೆಕ್ಟ್‌ ಮಾಡಿಸುತ್ತಿದ್ದ ಎನ್ನಲಾಗಿದೆ.

 

LEAVE A REPLY

Please enter your comment!
Please enter your name here