
ಬೆಂಗಳೂರು: ಇಂದು ದಕ್ಷಿಣ ಒಳನಾಡಿನ ಸುತ್ತಮುತ್ತ ಅತಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಕರಾವಳಿ ಮತ್ತು ಮಲೆನಾಡು ಸುತ್ತಮುತ್ತ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಸಾಧಾರಣ ಮಳೆಯಾಗಬಹುದು.
ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಸಾಧಾರಣ ಮಳೆಯಾಗಲಿದೆ.
ಕರಾವಳಿಯಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನ ಸುತ್ತಮುತ್ತ ಒಣಹವೆ ಇರುವ ಸಾಧ್ಯತೆ ಇದೆ. ಇನ್ನು ಮಲೆನಾಡಿನ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ.
