Home ಸುದ್ದಿಗಳು ರಾಜ್ಯದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ

ರಾಜ್ಯದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ

Notice for Prasadam examination of all Mujarai shrines of the state

ಬೆಂಗಳೂರು: ತಿರುಪತಿ ದೇಗುಲದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದ್ದು, ಮುಜರಾಯಿ ವ್ಯಾಪ್ತಿಗೆ ಬರುವ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ ತುಪ್ಪವನ್ನೇ ಬಳಸುವಂತೆ ಶುಕ್ರವಶರ ಸುತ್ತೋಲೆ ಹೊರಡಿಸಿದೆ.

ಜೊತೆಗೆ ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯದಲ್ಲಿ ಪರಿಶೀಲನೆಗೆ ಒಳಪಡಿಸುವಂತೆ ಆದೇಶಿಸಿದೆ.

ಮುಜರಾಯಿ ಇಲಾಖೆ ಅಡಿಯಲ್ಲಿ ರಾಜ್ಯದಲ್ಲಿ 34,000 ಕ್ಕೂ ಹೆಚ್ಚು ದೇವಾಲಯಗಳಿವೆ. ರಾಜ್ಯದ ದೇವಾಲಯಗಳು ಭಕ್ತರಿಗೆ ಸುರಕ್ಷಿತ ಮತ್ತು ಆರೋಗ್ಯಕರ ಪ್ರಸಾದ ಮತ್ತು ಆಹಾರವನ್ನು ನೀಡುತ್ತವೆ. ಹಾಗೂ ದೇವಾಲಯಗಳಲ್ಲಿ ದೀಪಗಳನ್ನು ಬೆಳಗಲು ಮತ್ತು ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಕಳೆದ ವರ್ಷ, ತಿರುಪತಿ ತಿರುಮಲ ದೇವಸ್ಥಾನವು ಕೆಎಂಎಫ್‌ನ ನಂದಿನಿ ತುಪ್ಪ ಮತ್ತು ಇತರ ಉತ್ಪನ್ನಗಳ ಖರೀದಿಯನ್ನು ಬೆಲೆಯ ಕಾರಣವೊಡ್ಡಿ ನಿಲ್ಲಿಸಿತ್ತು.

ಕೆಎಂಎಫ್ ಉಲ್ಲೇಖಿಸಿದ ಬೆಲೆಗಳನ್ನು ಟಿಟಿಡಿ ಅನುಮೋದಿಸದೆ ಇತರ ಕಂಪನಿಗಳಿಂದ ತುಪ್ಪವನ್ನು ಖರೀದಿಸಲು ಪ್ರಾರಂಭಿಸಿತ್ತು ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ತಿಳಿಸಿದ್ದರು.

ಪ್ರಸ್ತುತ ತಿರುಪತಿ ದೇವಸ್ಥಾನಕ್ಕೆ ಲಡ್ಡು ಪ್ರಸಾದ ತಯಾರಿಲು ನಂದಿನಿ ತುಪ್ಪವನ್ನು ಕರ್ನಾಟಕ ಪೂರೈಸುತ್ತಿದೆ.

 
Previous articleದಕ್ಷಿಣ ಒಳನಾಡಿನ ಸುತ್ತಮುತ್ತ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
Next articleಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ