
ಬೆಂಗಳೂರು: ಉತ್ತರ ಹಾಗೂ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುತ್ತದೆ. ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸಲಿದ್ದು ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿತ್ರದುರ್ಗ, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ.
ಬೆಂಗಳೂರು ಸುತ್ತಮುತ್ತ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಮಲೆನಾಡಿನ ಸುತ್ತಮುತ್ತ ಅಲ್ಲಲ್ಲಿ ತಕ್ಕಮಟ್ಟಿಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ, ಕೊಡಗು ಸೇರಿ ಹಾಸನದ ಹಲವೆಡೆ ಅತಿ ಹಗುರದೊಂದಿಗೆ ಭಾರಿ ಮಳೆಯಾಗಲಿದೆ.
