
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯರಪ್ಪನಹಳ್ಳಿ ಗ್ರಾಮದಲ್ಲಿ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತರನ್ನು ಆಫ್ರಿಕಾ ಮೂಲದ ಮೈಕಲ್ ಓಕೆಲಿ, ಮತ್ತು ಬೆಂಗಳೂರಿನ ಸಹನಾ ಎಂದು ಗುರುತಿಸಲಾಗಿದೆ.
ಆರೋಪಿ ಮೈಕೆಲ್ 2018ರಲ್ಲಿ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು, ಕೆ.ಆರ್ಪುರಂನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದನು. ಇಲ್ಲಿ, ಪಕ್ಕದ ಮನೆಯಲ್ಲಿ ವಾಸವಿದ್ದ ಸಹನಾ ಎಂಬುವರನ್ನು ಪ್ರೀತಿಸಿ ಮದುವೆ ಆಗಿದ್ದಾನೆ.
ನಂತರ ಇಬ್ಬರು ಸೇರಿಸಿಕೊಂಡು ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದರು.ಸ್ವಲ್ಪ ಸಮಯದ ನಂತರ ದಂಪತಿ ಕೆಆರ್ಪುರಂನಿಂದ ಯರಪ್ಪನಹಳ್ಳಿ ಗ್ರಾಮಕ್ಕೆ ಶಿಫ್ಟ್ ಆಗಿದ್ದಾರೆ. ಇಲ್ಲಿಂದಲೇ ಡ್ರಗ್ಸ್ ಸರಬರಾಜು ಮಾಡಲು ಆರಂಭಿಸಿದರು.
ಜುಲೈನಲ್ಲಿ ಬಂಧಿಸಿದ್ದ ಡ್ರಗ್ಸ್ ಪೆಡ್ಲರ್ ನೀಡಿದ ಮಾಹಿತಿಯ ಆಧಾರದ ಮೇಲೆ ಸಿಸಿಬಿ ಪೊಲೀಸರು ಮೈಕಲ್ನ ಬಂಧನಕ್ಕೆ ಬಲೆಬೀಸಿದ್ದರು.
ಬಂಧಿತರಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಒಂದು ಕೆಜಿಗೂ ಅಧಿಕ ತೂಕದ ಡ್ರಗ್ಸ್, ಮೂರು ಮೊಬೈಲ್ಎರಡು ಎಲೆಕ್ಟ್ರಾನಿಕ್ ತೂಕದ ಯಂತ್ರ ವಶಕ್ಕೆ ಪಡೆದಿದ್ದಾರೆ.
