
ನ್ಯೂಯಾರ್ಕ್: ನ್ಯೂಯಾರ್ಕ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವೆ ದ್ವಿಪಕ್ಷೀಯ ಮಾತು ಕತೆ ನಡೆಯಿತು.
ಮೂರು ದಿನಗಳ ಅಮೇರಿಕ ಪ್ರವಾಸದಲ್ಲಿ ಪ್ರಧಾನಿ ಮೋದಿ ಅವರು ಹಲವು ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಆ ಸಂದರ್ಭ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಿದರು.
ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗಿನ ಫೋಟೋವನ್ನು ಪ್ರಧಾನಿ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಎಎನ್‌ಐ ಶೇರ್ ಮಾಡಿರುವ ವಿಡಿಯೋದಲ್ಲಿ ಪ್ರಧಾನಿ ಮೋದಿ ಮತ್ತು ಝೆಲೆನ್ಸ್‌ಕಿ ತಬ್ಬಿಕೊಳ್ಳುತ್ತಿರುವ ಹಾಗೂ ಕೈಕುಲುಕುತ್ತಿರುವ ದೃಶ್ಯವಿದೆ.
ಈ 18 ಸೆಕೆಂಡುಗಳ ವೀಡಿಯೊ ಕ್ಲಿಪ್‌ನಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಕೂಡ ದ್ವಿಪಕ್ಷೀಯ ಸಭೆಯಲ್ಲಿ ಉಪಸ್ಥಿತರಿರುವುದು ಕಂಡುಬಂದಿದೆ.
ಉಕ್ರೇನ್ ಸಂಘರ್ಷದ ಬಗ್ಗೆ ಭಾರತದ ಗಮನ ಮತ್ತು ಶಾಂತಿಯನ್ನು ತರಲು ಪ್ರಧಾನಿ ಮೋದಿಯವರ ಪ್ರಯತ್ನಗಳನ್ನು ಝೆಲೆನ್ಸ್ಕಿ ಶ್ಲಾಘಿಸಿದರು. ಯುದ್ಧವು ಕೊನೆಗೊಳ್ಳಬೇಕು ಮತ್ತು ಪರಿಹಾರವನ್ನು ಕಂಡುಹಿಡಿಯಬೇಕು ಎಂದು ಒಪ್ಪಿಕೊಳ್ಳುವ ಅನೇಕ ವಿಶ್ವ ನಾಯಕರೊಂದಿಗೆ ಮಾತನಾಡಿದ್ದೇನೆ ಎಂದು ಅವರು ಹೇಳಿದರು.
