
ಬೆಂಗಳೂರು: ಇಂದು ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಮಲೆನಾಡು ಭಾಗದ ಹಾಸನ, ಕೊಡಗು ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ.
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ನೀಡಲಾಗಿದೆ.
ಉಳಿದಂತೆ ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
