
ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ ಮಳೆಯಾಗಲಿದೆ.
ಎಚ್ಎಎಲ್ನಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಇರಲಿದೆ.
