Home ಸುದ್ದಿಗಳು ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ನಾಗಸಂದ್ರ ಟು ಮಾದಾವರ ಮೆಟ್ರೋ ಸಂಚಾರ

ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ನಾಗಸಂದ್ರ ಟು ಮಾದಾವರ ಮೆಟ್ರೋ ಸಂಚಾರ

0
ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ನಾಗಸಂದ್ರ ಟು ಮಾದಾವರ ಮೆಟ್ರೋ ಸಂಚಾರ

ಬೆಂಗಳೂರು: ನಾಗಸಂದ್ರದಿಂದ ಮಾದಾವರವರೆಗಿನ 3.7 ಕಿಮೀ ಅಂತರದ ನಮ್ಮ ಮೆಟ್ರೋ ರೈಲು ಸಂಚಾರ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ.

ನಾಗಸಂದ್ರ ಟು ಮಾದಾವರವರೆಗಿನ ಮೆಟ್ರೋ ಮಾರ್ಗ ಕಾಮಗಾರಿ ಪೂರ್ಣಗೊಂಡಿದೆ. ಮತ್ತು ಟ್ರಯಲ್​ ರನ್​ ಕೂಡ ಯಶಸ್ವಿಯಾಗಿದೆ.

ಮಾದಾವರವರೆಗಿನ ವಿಸ್ತರಿತ ಮಾರ್ಗವನ್ನು ರೈಲ್ವೆ ಸುರಕ್ಷತಾ ಆಯುಕ್ತರು ಅಕ್ಟೋಬರ್ 3 ಮತ್ತು 4ರಂದು ಪರಿಶೀಲನೆ ನಡೆಸಲಿದ್ದಾರೆ. ಆಯುಕ್ತರು ಪರಿಶೀಲನೆ ನಡೆಸಿ, ಸಂಚಾರಕ್ಕೆ ಅನುಮತಿ ನೀಡಿದ ಬಳಿಕ ಶೀಘ್ರವೇ ಲೋಕಾರ್ಪಣೆ ದಿನಾಂಕ ಘೋಷಣೆಯಾಗಲಿದೆ.

ಮಂಜುನಾಥನಗರ, ಚಿಕ್ಕಬಿದರಕಲ್ಲು, ಮಾದಾವರ, ತುಮಕೂರು ರಸ್ತೆ, ಅಂಚೆಪಾಳ್ಯ, ಜಿಂದಾಲ್ ನಗರದ ನಾಗರಿಕರು ಮೆಟ್ರೋದಲ್ಲಿ ಪ್ರಯಾಣಿಸಲು ನಾಗಸಂದ್ರ ಮೆಟ್ರೊ ನಿಲ್ದಾಣಕ್ಕೆ ಬರಬೇಕಾಗಿತ್ತು, ಈಗ ಈ ಮಾರ್ಗ ಸಂಪೂರ್ಣವಾದ ಬಳಿಕ ಐದು ಕಿಲೋಮೀಟರ್‌ಗಳಷ್ಟು ಪ್ರಯಾಣಿಸುವುದು ತಪ್ಪಲಿದೆ.

ಭೂಸ್ವಾದೀನ, ಸ್ಥಳೀಯರ ವಿರೋಧ ಹಾಗೂ ನಂತರ ಕೊರೊನಾ ಸಮಸ್ಯೆ ಸೇರಿದಂತೆ ಹತ್ತು ಹಲವು ಸವಾಲು, ಸಮಸ್ಯೆಗಳ ಕಾರಣದಿಂದ ಐದು ವರ್ಷ ತಡವಾಗಿ ಈ ಮಾರ್ಗ ಮೆಟ್ರೋ ಸಂಚಾರಕ್ಕೆ ಲಭ್ಯವಾಗುತ್ತಿದೆ.

 

LEAVE A REPLY

Please enter your comment!
Please enter your name here