
ಮಂಡ್ಯ: ನಾಗಮಂಗಲ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಎಲ್ಲಾ ಆರೋಪಿಗಳಿಗೆ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿದೆ.
ನ್ಯಾಯಾಂಗ ಬಂಧನದಲ್ಲಿದ್ದ ಎರಡೂ ಕೋಮಿನ ಒಟ್ಟು 55 ಆರೋಪಿಗಳಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ತಲಾ ಒಂದು ಲಕ್ಷ ರೂ. ಮೌಲ್ಯದ ಬಾಂಡ್, ಪ್ರತೀ ಭಾನುವಾರ ಠಾಣೆಗೆ ತೆರಳಿ ಸಹಿ ಹಾಕಬೇಕು. ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ಅಪರಾಧಿ ಕೃತ್ಯದಲ್ಲಿ ಭಾಗಿಯಾಗದಂತೆ ಆರೋಪಿಗಳಿಗೆ ಷರತ್ತು ವಿಧಿಸಲಾಗಿದೆ.
