
ನವದೆಹಲಿ: ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ಕೊನೆಗೂ ತೆರೆಕಾಣುವ ಭಾಗ್ಯ ಸಿಕ್ಕಿದೆ.
ಸೆನ್ಸಾರ್ ಮಂಡಳಿಯವರು ‘ಎಮರ್ಜೆನ್ಸಿ’ ನೋಡಿ ನಂತರ ಅದನ್ನು ಪರಿಷ್ಕರಣಾ ಸಮಿತಿಗೆ ವರ್ಗಾಯಿಸಿತ್ತು. ಅವರು ಸಿನಿಮಾಗೆ ಸೆನ್ಸಾರ್ ಪ್ರಮಾಣಪತ್ರ ನೀಡಲು ನಿರಕಾರಿಸಿದ್ದರು. ಜೊತೆಗೆ ಒಂದಷ್ಟು ಬದಲಾವಣೆ ಮಾಡಲು ಸೂಚನೆ ನೀಡಿದ್ದರು.
ಆದರೆ, ಇದಕ್ಕೆ ತಂಡ ಸಿದ್ಧ ಇರಲಿಲ್ಲ. ಕೊನೆಗೆ ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.
ಈಗ ಪರಿಷ್ಕರಣಾ ಸಮಿತಿ ಸೂಚಿಸಿದ ಬದಲಾವಣೆಗಳನ್ನು ಮಾಡಲು ನಿರ್ಮಾಣ ಸಂಸ್ಥೆ ಒಪ್ಪಿದೆ. ಈ ಬಗ್ಗೆ ತಂಡದವರು ಬಾಂಬೆ ಹೈಕೋರ್ಟ್ಗೆ ಮಾಹಿತಿ ನೀಡಿದ್ದಾರೆ.
1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿಗೆ ಸಂಬಂಧಿಸಿದಂತೆ ಸಿನಿಮಾ ಇದೆ. ಕಂಗನಾ ಅವರು ಈ ಚಿತ್ರ ನಿರ್ದೇಶನ ಮಾಡಿದ್ದು ಜೊತೆಗೆ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅನುಪಮ್ ಖೇರ್, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಡೆ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ.
