
ಮಂಡ್ಯ: ಮಂಡ್ಯ ಜಿಲ್ಲೆಯ ಬೆಂಗಳೂರು-ಮೈಸೂರು ದಶಪತ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಾಂಜೋ ಆಸ್ಪತ್ರೆ ಬಳಿ ನಿಂತಿದ್ದ ಕಂಟೈನರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಅಪಘಾತದ ವೇಳೆ ಬಸ್‌ನಲ್ಲಿ 80ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದು, 20ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿದ್ದಾರೆ. 30ಕ್ಕೂ ಹೆಚ್ಚು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳ ಪೈಕಿ ವಿದ್ಯಾರ್ಥಿಗಳೇ ಹೆಚ್ಚು ಗಾಯಗೊಂಡಿದ್ದಾರೆ.
ಬೆಂಗಳೂರು ಕಡೆಯಿಂದ ಮಂಡ್ಯಕ್ಕೆ ತೆರಳುತ್ತಿದ್ದ ಬಸ್ ಎಕ್ಸ್‌ಪ್ರೆಸ್ ವೇ ನಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ.
ಬಸ್ ಪಲ್ಟಿ ಹೊಡೆದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅತಿವೇಗದ ಹಿನ್ನೆಲೆ ತಿರುವು ಇದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ.
ಗಾಯಾಳುಗಳನ್ನು ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.
