Home ಸುದ್ದಿಗಳು ಡಿ.10 ರಿಂದ 15 ರವರೆಗೆ ನಡೆಯಲಿದೆ 30ನೇ ವರ್ಷದ ಆಳ್ವಾಸ್ ವಿರಾಸತ್

ಡಿ.10 ರಿಂದ 15 ರವರೆಗೆ ನಡೆಯಲಿದೆ 30ನೇ ವರ್ಷದ ಆಳ್ವಾಸ್ ವಿರಾಸತ್

0
ಡಿ.10 ರಿಂದ 15 ರವರೆಗೆ ನಡೆಯಲಿದೆ  30ನೇ ವರ್ಷದ ಆಳ್ವಾಸ್ ವಿರಾಸತ್

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ನಡೆಸಿಕೊಂಡು ಬರುತ್ತಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಈ ವರ್ಷ ಡಿ. 10 ರಿಂದ 15 ರವರೆಗೆ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಹೇಳಿದ್ದಾರೆ.

ಆಳ್ವಾಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ವಿರಾಸತ್ 30ವರ್ಷಗಳನ್ನು ಪೂರೈಸುತ್ತಿದ್ದು, ಈ ಸಂದರ್ಭದಲ್ಲಿ ಅಪೂರ್ವ ಮತ್ತು ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ ಎಂದರು.

‘ಆಳ್ವಾಸ್ ವಿರಾಸತ್-2024’ನ್ನು ಅತ್ಯಂತ ಯಶಸ್ವೀ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ. ಆಳ್ವಾಸ್ ವಿರಾಸತ್-2024 ಡಿಸೆಂಬರ್ 10 ಮಂಗಳವಾರದಂದು ಪ್ರಾರಂಭವಾಗಿ ಡಿಸೆಂಬರ್ 15 ಭಾನುವಾರದಂದು ಮುಕ್ತಾಯಗೊಳ್ಳಲಿದೆ. ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ ಶನಿವಾರ ಮತ್ತು ಭಾನುವಾರಗಳು ಸೇರಿ ಒಟ್ಟು 6 ದಿನಗಳ ಕಾಲ ಈ ಸಾಂಸ್ಕೃತಿಕ ಉತ್ಸವವು ವೈಭವೋಪೇತವಾಗಿ ಜರುಗಲಿದೆ ಎಂದರು.

ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಪನ್ನ ಕರಕುಶಲ ವಸ್ತುಗಳೇ ಮೊದಲಾದ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು ಕೊನೆಯ ದಿನ (ಭಾನುವಾರ)ವನ್ನು ಕೇವಲ ವಸ್ತುಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ.

ಆಳ್ವಾಸ್ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್ 2024 ಕ್ಕೆ ಸಂಸ್ಕೃತಿ ಪ್ರಿಯರೂ ಕಲಾಪ್ರೇಮಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕು ಎಂದರು.

 

LEAVE A REPLY

Please enter your comment!
Please enter your name here