Home ಸುದ್ದಿಗಳು ಬಾಲಿವುಡ್‌ ನಟ ಗೋವಿಂದ ಕಾಲಿಗೆ ಗುಂಡೇಟು

ಬಾಲಿವುಡ್‌ ನಟ ಗೋವಿಂದ ಕಾಲಿಗೆ ಗುಂಡೇಟು

0
ಬಾಲಿವುಡ್‌ ನಟ ಗೋವಿಂದ ಕಾಲಿಗೆ ಗುಂಡೇಟು

ಮುಂಬೈ: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಗುಂಡು ತಗುಲಿದ ಘಟನೆ ಗೋವಿಂದ ಅವರ ಜುಹು ನಿವಾಸದಲ್ಲಿ ನಡೆದಿದೆ.

ನಟ ತನ್ನ ಪರವಾನಗಿ ಪಡೆದ ರಿವಾಲ್ವರ್ ಅನ್ನು ಪರಿಶೀಲಿಸುತ್ತಿದ್ದಾಗ ರಿವಾಲ್ವರ್​​ ಲಾಕ್​ ಓಪನ್​ ಆಗಿದ್ದರಿಂದ ಆಕಸ್ಮಿಕವಾಗಿ ಗೋವಿಂದ ಕೈಯಿಂದ ಬಿದ್ದು, ಕಾಲಿಗೆ ಗುಂಡು ತಗುಲಿದೆ ಎನ್ನಲಾಗಿದೆ.

ಕೂಡಲೇ ಗೋವಿಂದ ಕುಟುಂಬಸ್ಥರು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಮುಂಜಾನೆ 4.45ರ ಸುಮಾರಿಗೆ ಘಟನೆ ನಡೆದಿದೆ.

ಮುಂಬೈನ ಅಂಧೇರಿಯಲ್ಲಿರುವ ಆಸ್ಪತ್ರೆಯಲ್ಲಿ ಗೋವಿಂದಗೆ ಟ್ರೀಟ್​ಮೆಂಟ್​ ಮುಂದುವರಿದಿದೆ. ಅದೃಷ್ಟವಶಾತ್‌ ಗೋವಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೋಲ್ಕತ್ತಾದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಹೋಗಲು ಗೋವಿಂದ ಅವರು ತಮ್ಮ ನಿವಾಸದಿಂದ ವಿಮಾನ ನಿಲ್ದಾಣಕ್ಕೆ ತೆರಳಲು ಹೊರಟಿದ್ದರು. ಆಗ ಈ ಅವಘಡ ಸಂಭವಿಸಿದೆ ಎಂದು ನಟನ ಮ್ಯಾನೇಜರ್ ಶಶಿ ಸಿನ್ಹಾ ಹೇಳಿದ್ದಾರೆ.

 

LEAVE A REPLY

Please enter your comment!
Please enter your name here