
ಮುಂಬೈ: ಹೆಲಿಕಾಪ್ಟರ್ ಒಂದು ಪುಣೆಯ ಬವ್ಧಾನ್ ನ ಗುಡ್ಡಗಾಡು ಪ್ರದೇಶದಲ್ಲಿ ಪತನಗೊಂಡಿದೆ.
ಖಾಸಗಿ ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಎಂಜಿನಿಯರ್ ಇದ್ದರು ಎಂದು ತಿಳಿದು ಬಂದಿದೆ. ಮೂವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ನಂತರ ಹೆಲಿಕಾಪ್ಟರ್‌ಗೆ ಬೆಂಕಿ ಹೊತ್ತಿಕೊಂಡಿದೆ, ಇದರಿಂದಾಗಿ ಮೂವರ ದೇಹವೂ ಸುಟ್ಟು ಕರಕಲಾಗಿದೆ.
ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್ ಆಕ್ಸ್‌ಫರ್ಡ್ ಗಾಲ್ಫ್ ಕ್ಲಬ್‌ನ ಹೆಲಿಪ್ಯಾಡ್‌ನಿಂದ ಟೇಕಾಫ್ ಆಗಿದ್ದು, ಆ ಪ್ರದೇಶದಲ್ಲಿ ದಟ್ಟವಾದ ಮಂಜಿನಿಂದಾಗಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
