
ಬೆಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ಬುಧವಾರ ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಸಚಿವ ದಿನೇಶ್ ಗುಂಡೂರಾವ್ ನೀಡಿದ ಹೇಳಿಕೆ ಈಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ವಿನಾಯಕ ದಾಮೋದರ್ ಸಾವರ್ಕರ್ ಒಬ್ಬ ಬ್ರಾಹ್ಮಣ. ಮೂಲಭೂತವಾದಿಯಾಗಿದ್ದರೂ ಮಾಡರ್ನ್ ಆಗಿದ್ದ ಅವರು ದನದ ಮಾಂಸ ಸೇವನೆ ಮಾಡುತ್ತಿದ್ದರು ಎಂದು ಕೆಲವರು ಹೇಳಿದ್ದಾರೆ. ಸಾವರ್ಕರ್ ಬಹಿರಂಗವಾಗಿಯೇ ಮಾಂಸಾಹಾರ ಸೇವನೆ ಬಗ್ಗೆ ಅರಿವು ಮೂಡಿಸುತ್ತಿದ್ದರು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಹಾಗೆ ನೋಡಲು ಹೋದರೆ ಮಹಾತ್ಮ ಗಾಂಧಿ ಸಸ್ಯಾಹಾರಿ. ಅವರಿಗೆ ಹಿಂದೂ ಸಂಸ್ಕೃತಿ ಬಗ್ಗೆ ಅಪಾರವಾದ ಗೌರವ, ನಂಬಿಕೆ ಇತ್ತು. ಆದರೆ, ಅವರ ಅಭಿಪ್ರಾಯ ಬೇರೆ ರೀತಿಯಲ್ಲತ್ತು. ಅವರು ಡೆಮಾಕ್ರಟಿಕ್ ಆಗಿದ್ದರು ಎಂದು ಗುಂಡೂರಾವ್ ಹೇಳಿದ್ದರು.
