
ಬೆಂಗಳೂರು: ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಳಗಾವಿ, ಧಾರವಾಡ, ಗದಗ,ಕೊಪ್ಪಳ, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ , ದಾವಣಗೆರೆ ಜಿಲ್ಲೆಯಲ್ಲಿ ಗುಡುಗು, ಮಿಂಚು, ಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಹೀಗಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದರೆ, ರಾಜ್ಯದ ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಇಂದೂ ಬೆಂಗಳೂರಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡದ ಸುತ್ತಮುತ್ತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಗುಡುಗು ಕೂಡ ಬರಲಿದೆ.
ಉತ್ತರ ಒಳನಾಡಿನಲ್ಲಿ ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗಲಿದೆ.
