Home ಸುದ್ದಿಗಳು ಮನೆಗೆ ನುಗ್ಗಿ ಶಿಕ್ಷಕರ ಇಡೀ ಕುಟುಂಬವನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಮನೆಗೆ ನುಗ್ಗಿ ಶಿಕ್ಷಕರ ಇಡೀ ಕುಟುಂಬವನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

0
ಮನೆಗೆ ನುಗ್ಗಿ ಶಿಕ್ಷಕರ ಇಡೀ ಕುಟುಂಬವನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಉತ್ತರ ಪ್ರದೇಶ: ಉತ್ತರ ಪ್ರದೇಶದ ಅಮೇಥಿಯ ಅಹೋರ್ವ ಭವಾನಿ ಕ್ರಾಸಿಂಗ್ ಬಳಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಕೆಲ ಶಸ್ತ್ರಸಜ್ಜಿತ ವ್ಯಕ್ತಿಗಳು ಶಿಕ್ಷಕರ ಮನೆಗೆ ನುಗ್ಗಿ ಶಿಕ್ಷಕ ದಂಪತಿ ಹಾಗೂ ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಮೃತರನ್ನು ಶಿಕ್ಷಕ ಸುನಿಲ್ ಕುಮಾರ್ ಅವರ ಪತ್ನಿ ಪೂನಂ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು, 5 ಮತ್ತು 2 ವರ್ಷಗಳು ಎಂದು ಗುರುತಿಸಲಾಗಿದೆ.

ಶಿಕ್ಷಕ ದಂಪತಿಗಳು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಸುನಿಲ್ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದು, ಸಿಂಗ್‌ಪುರ ಬ್ಲಾಕ್‌ನಲ್ಲಿರುವ ಪನ್ಹೋನಾ ಕಾಂಪೋಸಿಟ್ ಸ್ಕೂಲ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. 2020 ರಲ್ಲಿ ಶಿಕ್ಷಕರಾಗುವ ಮೊದಲು, ಅವರು ಉತ್ತರ ಪ್ರದೇಶ ಪೊಲೀಸ್‌ನಲ್ಲಿ ಸೇವೆ ಸಲ್ಲಿಸಿದ್ದರು.

ದರೋಡೆ ಮಾಡಿದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಮತ್ತು ಅಪರಾಧದ ಹಿಂದಿನ ಉದ್ದೇಶವು ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪೂನಂ ಆಗಸ್ಟ್​ 18ರಂದು ಚಂದನ್ ವರ್ಮಾ ಎಂಬಾತನ ವಿರುದ್ಧ ಕಿರುಕುಳ, ಹಲ್ಲೆ ಮತ್ತು ಕೊಲೆ ಬೆದರಿಕೆ ಆರೋಪದಡಿ ದೂರು ದಾಖಲಿಸಿದ್ದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಭರವಸೆ ನೀಡಿದ್ದಾರೆ.

 

LEAVE A REPLY

Please enter your comment!
Please enter your name here