
ಸವಣೂರು: ಪಿಕಪ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಸವಣೂರು ಸಮೀಪ ಚಾಪಳ್ಳ ಎಂಬಲ್ಲಿ ನಡೆದಿದೆ.
ಈ ಘಟನೆಯಲ್ಲಿ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾನೆ.
ಗಾಯಗೊಂಡವರನ್ನು ಕಾಣಿಯೂರು ಗ್ರಾಮದ ಪುಣತ್ತಾರು ನಿವಾಸಿ ಭಾಸ್ಕರ (53) ಹಾಗೂ ಆಲಂಕಾರು ಗ್ರಾಮದ ಕೊಂಡಾಡಿಕೊಪ್ಪ ನಿವಾಸಿ ಪವನ್ (18) ಎಂದು ಗುರುತಿಸಲಾಗಿದೆ. ಭಾಸ್ಕರ ಅವರ ಮುಖ ಹಾಗೂ ತಲೆಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂರು ಕಡೆಯಿಂದ ಬರುತ್ತಿದ್ದ ಪಿಕಪ್ ಮತ್ತು ಪುತ್ತೂರು ಕಡೆಗೆ ಹೋಗುತ್ತಿದ್ದ ಬೈಕ್ ಮಧ್ಯೆ ಅಪಘಾತ ನಡೆದಿದೆ. ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಯನ್ನು ತಪ್ಪಿಸುವ ಸಂದರ್ಭದಲ್ಲಿ ಅಪಘಾತ ನಡೆದಿದೆ ಎನ್ನಲಾಗುತ್ತಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
