Home ಸುದ್ದಿಗಳು ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ತಾರತಮ್ಯ: ಡಿಕೆ ಶಿವಕುಮಾರ್

ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ತಾರತಮ್ಯ: ಡಿಕೆ ಶಿವಕುಮಾರ್

0
ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ತಾರತಮ್ಯ: ಡಿಕೆ ಶಿವಕುಮಾರ್

ಬೆಂಗಳೂರು: ಅತಿಹೆಚ್ಚು ತೆರಿಗೆ ಪಾವತಿಸುವ ನಮ್ಮ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ತಾರತಮ್ಯವಾಗುತ್ತಿದೆ. ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ಮಾಡುತ್ತೇವೆ. ನಮ್ಮ ತೆರಿಗೆ ಹಣ ಉತ್ತರ ಪ್ರದೇಶ, ದೆಹಲಿ, ಬಿಹಾರಕ್ಕೆ ಕೊಡುತ್ತಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಕೇಂದ್ರ ಸರ್ಕಾರದಲ್ಲಿ ಐವರು ಸಚಿವರು ನಮ್ಮ ರಾಜ್ಯದಿಂದ ಇದ್ದಾರೆ. ನಮ್ಮಲ್ಲೇ ಇದ್ದುಕೊಂಡು ಈಗ ನಮಗೆ ಅನ್ಯಾಯ ಮಾಡುತ್ತಿದ್ದಾರೆ.

ಆಂಧ್ರಕ್ಕಿಂತ‌ಲೂ ಕಡಿಮೆ ಹಣ ನಮಗೆ ನೀಡಿದ್ದಾರೆ. ಅವರಿಗಿಂತ ನಾವು ಕೀಳಾ ಹಾಗಾದರೆ? ಇದರ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

 

LEAVE A REPLY

Please enter your comment!
Please enter your name here