
ನವದೆಹಲಿ: ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿದ ಘಟನೆ ನಡೆದಿದೆ.
ಮುಂಬೈನಿಂದ ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣಕ್ಕೆ AI 119 ವಿಮಾನವು ಮುಂಬೈನಿಂದ ಸುಮಾರು 2 ಗಂಟೆಗೆ ಹೊರಟಿತ್ತು. ಮಧ್ಯದಲ್ಲೇ ವಾಪಸ್ ತಿರುಗಿಸಿ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್ ಮಾಡಲಾಗಿದೆ.
ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಬಳಿಕ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.
