
ಉಪ್ಪಿನಂಗಡಿ: ಉದ್ಯೋಗ ಭರವಸೆ ನೀಡಿ ಕೋಟ್ಯಂತರ ರೂಪಾಯಿ ವಂಚಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉದ್ಯೋಗ ಬಯಸಿದ ತನ್ನ ಗೆಳತಿಯಿಂದಲೇ 13,11,600 ರೂ ಪಡೆದು ವಂಚಿಸಿದ ಸಚಿತಾ ರೈ ವಿರುದ್ಧ ರಕ್ಷಿತಾ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.
ಕೇರಳದ ನೀರಾವರಿ ಇಲಾಖೆ ಅಥವಾ ಎಸ್‌ಬಿಐ ಬ್ಯಾಂಕಿನಲ್ಲಿ ಉದ್ಯೋಗ ಒದಗಿಸುವ ಅವಕಾಶವಿದೆ ಎಂದು ನಂಬಿಸಿ ಒಟ್ಟು 13,11,600 ರೂಪಾಯಿ ಪಡೆದುಕೊಂಡಿದ್ದಾರೆ.
ಈ ಹಣದ ಪೈಕಿ 8,66,868ನ್ನು ಬ್ಯಾಂಕ್ ಖಾತೆ ಮೂಲಕ ವರ್ಗಾಯಿಸಲಾಗಿದ್ದರೆ, ಉಳಿದ ಮೊತ್ತವನ್ನು ಗೂಗಲ್ ಪೇ ಮೂಲಕ ಪಾವತಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಸಚಿತಾ ರೈ ತನಗೆ ಸರಕಾರಿ ಇಲಾಖೆಯಲ್ಲಿ ಉದ್ಯೋಗ ಒದಗಿಸುವ ಭರವಸೆ ನೀಡಿ ಒಂದಷ್ಟು ಖರ್ಚು ತಗಲುತ್ತದೆ ಎಂದು ಮೊದಲನೇ ಕಂತು ಪಡೆದು, ಬಳಿಕ ವಿವಿಧ ನೆಪಗಳನ್ನು ಮುಂದಿಟ್ಟು ಒಟ್ಟು 13 ಲಕ್ಷಕ್ಕೂ ಮಿಕ್ಕಿದ ಹಣವನ್ನು ಪಡೆದಿದ್ದಾಳೆ.
ಈ ಪ್ರಕರಣದ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
