
ಪುಂಜಾಲಕಟ್ಟೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಆಳದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದ ಘಟನೆ ಬಿಸಿರೋಡು- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ.
ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಟಾರ್ಕ್ ಕಾರು ಮುಂಜಾನೆ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿ ಬಿದ್ದಿದೆ.
ಈ ಘಟನೆಯಲ್ಲಿ ಮಹಿಳೆಯೊಬ್ಬರು ಮೃತ ಪಟ್ಟಿದ್ದು ಮೃತರನ್ನು ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58 ವ) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು ಕಾರು ಚಾಲನೆ ಮಾಡುತ್ತಿದ್ದ ರೂಪೇಶ್ (40 ವ) ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರೂಪೇಶ್ ಅವರ ಪತ್ನಿ ಸುಚಿತ್ರಾ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
