
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಶಾಲಾ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿಯಲ್ಲಿ ನಡೆದಿದೆ.
ಆರೋಪಿಯನ್ನು ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿವಾಸಿ, ಹುಲ್ಲು ಕಟಾವು ಯಂತ್ರದ ಮೆಕ್ಯಾನಿಕ್ ಆಗಿರುವ ಜುಮಾರ್ (24) ಎಂದು ಗುರುತಿಸಲಾಗಿದೆ.
ಘಟನೆ ಏನು: ಬಾಲಕಿಯು ತನ್ನ ಸಂಬಂಧಿ ಹಾಗೂ ನೆರೆಯ ವಿದ್ಯಾರ್ಥಿನಿಯೊಂದಿಗೆ ಕಾಲೇಜಿಗೆ ಹೋಗುತ್ತಿರುವ ವೇಳೆ ಕಳೆದ ಐದು ದಿನಗಳಿಂದ ಆರೋಪಿಯು ಬೈಕಿನಲ್ಲಿ ಹಿಂಬಾಲಿಸಿಕೊಂಡು ಬರುತ್ತಿದ್ದು, ಬೈಕ್ ನಿಲ್ಲಿಸಿ ಬೈಕ್‌ನಲ್ಲಿ ಬರುತ್ತೀರಾ, ನಿಮ್ಮ ಫೋನ್ ನಂಬರ್ ಕೊಡಿ ಎಂದು ಕೇಳುತ್ತಿದ್ದ ಎಂದು ಆರೋಪಿಸಲಾಗಿದೆ.
ಈತನ ವಿರುದ್ಧ ವೇಣೂರು ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
