Home ಸುದ್ದಿಗಳು ಹುಟ್ಟು ಹಬ್ಬದ ಔತಣ ಕೂಟಕ್ಕಾಗಿ ಕಡವೆಯ ಹತ್ಯೆ: ಕೋವಿ, ಮಾಂಸ ವಶ

ಹುಟ್ಟು ಹಬ್ಬದ ಔತಣ ಕೂಟಕ್ಕಾಗಿ ಕಡವೆಯ ಹತ್ಯೆ: ಕೋವಿ, ಮಾಂಸ ವಶ

0
ಹುಟ್ಟು ಹಬ್ಬದ ಔತಣ ಕೂಟಕ್ಕಾಗಿ ಕಡವೆಯ ಹತ್ಯೆ: ಕೋವಿ, ಮಾಂಸ ವಶ

ಉಪ್ಪಿನಂಗಡಿ: ಹುಟ್ಟು ಹಬ್ಬಕ್ಕಾಗಿ ಕಡವೆಯೊಂದನ್ನು ಗುಂಡಿಕ್ಕಿ ಕೊಂದು ಅದರ ಮಾಂಸವನ್ನು ಮನೆಯ ಫ್ರಿಡ್ಜ್ ನಲ್ಲಿ ದಾಸ್ತಾನು ಇರಿಸಿದ್ದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್‌ ಮತ್ತವರ ಸಹವರ್ತಿಗಳು ರಕ್ಷಿತಾರಣ್ಯದಲ್ಲಿ ಕಡವೆಯೊಂದನ್ನು ಗುಂಡಿಕ್ಕಿ ಹತ್ಯೆಗೈದಿದ್ದರು.

ಘಟನೆ ಏನು: ಮಗನ ಹುಟ್ಟು ಹಬ್ಬದ ಔತಣ ಕೂಟಕ್ಕಾಗಿ ಮಾಂಸ ಮಾಡಿ ಮನೆಯ ಪ್ರೀಝರ್‌ನಲ್ಲಿ ಇರಿಸಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ನಿರ್ದೇಶನದ ಮೇರೆಗೆ ಉಪವಲಯ ಅರಣ್ಯಾಧಿಕಾರಿಗಳ ತಂಡ ಸುರೇಶ್‌ ಮನೆಗೆ ದಾಳಿ ನಡೆಸಿ ಸಂಗ್ರಹಿಸಿಟ್ಟ ಮಾಂಸ ಹಾಗೂ ಹತ್ಯೆಗೆ ಬಳಸಲಾದ ಕೋವಿಯನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಕಾರ್ಯಾಚರಣೆ ವೇಳೆ ಆರೋಪಿಗಳು ಗುಂಡ್ಯ ಹೊಳೆಯನ್ನು ಈಜಿ ದಾಟುವ ಮೂಲಕ ಪರಾರಿಯಾಗಿದ್ದಾರೆ.

 

LEAVE A REPLY

Please enter your comment!
Please enter your name here